ಶನಿವಾರ, ಫೆಬ್ರವರಿ 16, 2013

ಬಿದ್ದಿಯಬ್ಬೇ ಮುದುಕಿ

ಬಿದ್ದಿಯಬ್ಬೇ ಮುದುಕಿ
ಬಿದ್ದೀಯಬ್ಬೇ.
ಬಿದ್ದಿಯಬ್ಬೇ ಮುದುಕಿ
ಬಿದ್ದೀಯಬ್ಬೇ.
ನೀ ದಿನ ಹೋದಾಕಿ
ಇರು ಭಾಳ ಜೋಕಿ
ನೀ ದಿನ ಹೋದಾಕಿ
ಇರು ಭಾಳ ಜೋಕಿ
ಬಿದ್ದಿಯಬ್ಬೇ ಮುದುಕಿ ಬಿದ್ದಿಯಬ್ಬೇ
ಬಿದ್ದಿಯಬ್ಬೇ ಮುದುಕಿ ಬಿದ್ದಿಯಬ್ಬೇ

ಸದ್ಯಕಿದು ಹುಲುಗೂರ ಸಂತಿ
ಗದ್ದಲದೊಳಗ್ಯಾಕ ನಿಂತಿ?
ಸದ್ಯಕಿದು ಹುಲುಗೂರ ಸಂತಿ
ಗದ್ದಲದೊಳಗ್ಯಾಕ ನಿಂತಿ?
ಬಿದ್ದು ಇಲ್ಲಿ ಒದ್ದಾಡಿದರ
ಎದ್ದು ಹ್ಯಾಂಗ ಹಿಂದಕ ಬರತಿ?
ಬಿದ್ದು ಇಲ್ಲಿ ಒದ್ದಾಡಿದರ
ಎದ್ದು ಹ್ಯಾಂಗ ಹಿಂದಕ ಬರತಿ?
ಬುದ್ದಿಗೇಡಿ ಮುದುಕಿ ನೀನು ಬಿದ್ದಿಯಬ್ಬೇ

ಬಿದ್ದಿಯಬ್ಬೇ ಮುದುಕಿ
ಬಿದ್ದೀಯಬ್ಬೇ.
ಬಿದ್ದಿಯಬ್ಬೇ ಮುದುಕಿ
ಬಿದ್ದೀಯಬ್ಬೇ.

ಬುಟ್ಟಿಯಲ್ಲಿ ಪತ್ತಲ ಇಟ್ಟಿ
ಅದನು ಉಟ್ಟ ಹೊತ್ತೊಳು ಜೋಕಿ
ಕೆಟ್ಟಗಂಟಿ ಚೌಡೇರು ಬಂದು
ಉಟ್ಟದ್ದನ್ನೆ ಕದ್ದಾರ ಜೋಕಿ!
ಬುದ್ಧಿಗೇಡಿ ಮುದುಕಿ ನೀನು ಬಿದ್ದೀಯಬ್ಬೇ

ಬಿದ್ದಿಯಬ್ಬೇ ಮುದುಕಿ
ಬಿದ್ದೀಯಬ್ಬೇ.
ಬಿದ್ದಿಯಬ್ಬೇ ಮುದುಕಿ
ಬಿದ್ದೀಯಬ್ಬೇ.

ಶಿಶುನಾಳಾಧೀಶನ ಮುಂದೆ
ಕೊಸರಿ ಕೊಸರಿ ಹೋಗಬ್ಯಾಡ,
ಶಿಶುನಾಳಾಧೀಶನ ಮುಂದೆ
ಕೊಸರಿ ಕೊಸರಿ ಹೋಗಬ್ಯಾಡ
ಹಸನವಿಲ್ಲ ಹರಯ ಸಂದ
ಪಿಸುರು ಪಿಚ್ಚುಗಣ್ಣಿನ ಮುದುಕಿ
ಹಸನವಿಲ್ಲ ಹರಯ ಸಂದ
ಪಿಸುರು ಪಿಚ್ಚುಗಣ್ಣಿನ ಮುದುಕಿ
ಬುದ್ದಿಗೇಡಿ ಮುದುಕಿ ನೀನು ಬಿದ್ದೀಯಬ್ಬೇ

ಬಿದ್ದಿಯಬ್ಬೇ ಮುದುಕಿ
ಬಿದ್ದೀಯಬ್ಬೇ.
ಬಿದ್ದಿಯಬ್ಬೇ ಮುದುಕಿ
ಬಿದ್ದೀಯಬ್ಬೇ.
ನೀ ದಿನ ಹೋದಾಕಿ
ಇರು ಭಾಳ ಜೋಕಿ
ನೀ ದಿನ ಹೋದಾಕಿ
ಇರು ಭಾಳ ಜೋಕಿ
ಬಿದ್ದಿಯಬ್ಬೇ ಮುದುಕಿ ಬಿದ್ದಿಯಬ್ಬೇ
ಬಿದ್ದಿಯಬ್ಬೇ ಮುದುಕಿ ಬಿದ್ದಿಯಬ್ಬೇ
ಬಿದ್ದಿಯಬ್ಬೇ ಮುದುಕಿ ಬಿದ್ದಿಯಬ್ಬೇ

http://api.cld.me/253A30162b0o2t2o0d3y/download/Biddiyabbe.mp3

ಎಲ್ಲರಂಥವನಲ್ಲ ನನ್ನ ಗಂಡ

ಎಲ್ಲರಂಥವನಲ್ಲ ನನ್ನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ್ನ ಗಂಡ
ಎಲ್ಲರಂಥವನಲ್ಲ ಕೇಳೆ
ಸೊಲ್ಲು ಸೊಲ್ಲಿಗೆ ಬಯ್ದು ನನ್ನ
ಎಲ್ಲೂ ಹೋಗದ ಹಾಂಗ ಮಾಡಿಟ್ಟಾ
ಕಾಲ್ಮುರಿದು ಬಿಟ್ಟಾ
ಎಲ್ಲರಂಥವನಲ್ಲ ನನ್ನ ಗಂಡ

ತುಂಟ ಸವತಿಯ ಸೊಂಟಮುರಿ ಹೊಡೆದಾ
ಒಣ ಪಂಟಮಾತಿನ
ಗಂಟುಗಳ್ಳರ ಮನೆಗೆ ಬರಗೊಡದಾ
ಕುಂಟಕುರುಡಾರೆಂಟು ಮಂದಿ
ಗಂಟುಬಿದ್ದರೆ ಅವರ ಕಾಣುತ
ಗಂಟಲಕೆ ಗಾಣಾದನೇಳಕ್ಕಾ
ತಕ್ಕವನೇ ಸಿಕ್ಕಾ
ಎಲ್ಲರಂಥವನಲ್ಲ ನನ್ನ ಗಂಡ

ಎಲ್ಲರಂಥವನಲ್ಲ ನನ್ನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ್ನ ಗಂಡ

ಅತ್ತೆಮಾವರ ಮನೆಯ ಬಿಡಿಸಿದನೇ
ಮತ್ತಲ್ಲಿ ಮೂವರ
ಮಕ್ಕಳೈವರ ಮಮತೆ ಕೆಡಿಸಿದನೇ
ಎತ್ತ ಹೋಗದೆ ಚಿತ್ತವಗಲದೆ
ಗೊತ್ತಿನಲ್ಲಿ ಇಟ್ಟು ನನ್ನನು
ಮುತ್ತಿನಾ ಮೂಗುತಿಯ ಕೊಟ್ಟಾನೇ
ಅವನೇನು ದಿಟ್ಟನೆ
ಎಲ್ಲರಂಥವನಲ್ಲ ನನ್ನ ಗಂಡ

ಎಲ್ಲರಂಥವನಲ್ಲ ನನ್ನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ್ನ ಗಂಡ

ಕಾಂತೆ ಕೇಳೆ ಕರುಣ ಗುಣದಿಂದ
ಎನಗಿಂಥ ಪುರುಷನು
ಬಂದು ದೊರಕಿದ ಪುಣ್ಯಫಲದಿಂದಾ
ಕಾಂತೆ ಬಾರೆಂತೆಂದು ಕರೆದೇ-
ಕಾಂತ ಮಂದಿರದೊಳಕೆ ಒಯ್ದು
ಭ್ರಾಂತಿ ಭವ ದುರಿತವನು ಹರಿಸಿದನೇ
ಶಿಶುನಾಳ ಧೀಶ

ಎಲ್ಲರಂಥವನಲ್ಲ ನನ್ನ ಗಂಡ
ಎಲ್ಲರಂಥವನಲ್ಲ ನನ್ನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ್ನ ಗಂಡ
ಎಲ್ಲರಂಥವನಲ್ಲ ನನ್ನ ಗಂಡ
http://api.cld.me/1p1c2V1U0N3Q3O2C3f1D/download/08%20Ellaranthavanalla.mp3

ಮೌನ ತಬ್ಬಿತು ನೆಲವ

ಸಾಹಿತ್ಯ – ಗೋಪಾಲ ಕೃಷ್ಣ ಅಡಿಗ
ಸಂಗೀತ / ಗಾಯನ – ಸಿ ಅಶ್ವಥ್


ಮೌನ ತಬ್ಬಿತು ನೆಲವ; ಜುಮ್ಮೆನೆ ಪುಳಕಗೊಂಡಿತು ಧಾರಿಣಿ
ನೋಡಿ ನಾಚಿತು ಬಾನು; ಸೇರಿತು ಕೆಂಪು ಸಂಜೆಯ ಕದಪಲಿ
ಹಕ್ಕಿಗೊರಲಿನ ಸುರತಗಾನಕೆ ಬಿಗಿಯು ನಸುವೆ ಸಡಿಲಿತು
ಬೆಚ್ಚಬೆಚ್ಚನೆಯುಸಿರಿನಂದದಿ ಗಾಳಿ ಮೆಲ್ಲನೆ ತೆವಳಿತು

ಇರುಳ ಸೆರಗಿನ ನೆಳಲು ಚಾಚಿತು, ಬಾನು ತೆರೆಯಿತು ಕಣ್ಣನು;
ನೆಲವು ತಣಿಯಿತು, ಬೆವರು ಹನಿಯಿತು; ಭಾಷ್ಪ ನೆನೆಸಿತು ಹುಲ್ಲನು
ಮೌನ ಉರುಳಿತು, ಹೊರಳಿತೆದ್ದಿತು; ಗಾಳಿ ಭೋರನೆ ಬೀಸಿತು,
ತೆಂಗುಗರಿಗಳ ಚಾಮರಕೆ ಹಾಯೆಂದು ಮೌನವು ಮಲಗಿತು

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ

ಸಾಹಿತ್ಯ – ಡಾ. ಎನ್. ಎಸ್. ಲಕ್ಷ್ಮಿ ನಾರಾಯಣ ಭಟ್ಟ
ಸಂಗೀತ – ಮೈಸೂರು ಅನಂತಸ್ವಾಮಿ
ಗಾಯನ – ಎಂ ಡಿ ಪಲ್ಲವಿ


ಕೃಷ್ಣ ….. ಕೃಷ್ಣ …. ಕೃಷ್ಣ …. ಕೃಷ್ಣ ……….
ಕೃಷ್ಣಾ …….

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ … (೨)
ನಾ ತಾಳಲಾರೆ ಈ ವಿರಹ ಕೃಷ್ಣ .. (೨)
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ…

ಕಮಲವಿಲ್ಲದ ಕೆರೆ ನನ್ನ ಬಾಳು
ಚಂದ್ರ ಇಲ್ಲದಾ ರಾತ್ರಿ ಬೀಳು (೨)
ನೀ ಸಿಗದೇ ಉರಿ ಉರಿ ಕಳೆದೆ ಇರುಳ… (೨)
ಮಾತೆಲ್ಲ ಬಿಗಿದಿದೆ ದುಃಖ ಕೊರಳ…..
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ … (೨)

ಅನ್ನ ಸೇರದು ನಿದ್ದೆ ಬಂದುದೆಂದು
ಕುದಿವೆ ಒಂದೇ ಸಮ ಕೃಷ್ಣ ಎಂದು… (೨)
ಯಾರು ಅರಿವರು ಹೇಳು ನನ್ನ ನೋವ …(೨)
ತಲ್ಲಣಿಸಿ ಕೂಗುತಿದೆ ದಾಸಿ ಜೀವ

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ.. (೨)

ಒಳಗಿರುವ ಗಿರಿಧರನೇ ಹೊರಗೆ ಬಾರೋ
ಕಣ್ಣೆದುರು ನಿಂತು ಆ ರೂಪ ತೋರೋ (೨)
ಜನುಮ ಜನುಮದಾ ರಾಗ ನನ್ನ ಪ್ರೀತಿ .. ಕೃಷ್ಣ .. ಕೃಷ್ಣ … ಕೃಷ್ಣಾ …
ಕೃಷ್ಣ …
ಜನುಮ ಜನುಮದಾ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೇ ಅದರಾ ರೀತಿ

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ … (೨)
ನಾ ತಾಳಲಾರೆ ಈ ವಿರಹ ಕೃಷ್ಣ .. (೨)
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ… ಕೃಷ್ಣ .. ಕೃಷ್ಣ .. ಕೃಷ್ಣಾ ..

ಜೋಗದ ಸಿರಿ ಬೆಳಕಿನಲ್ಲಿ

ಹಾಡು: ನಿತ್ಯೋತ್ಸವ
ರಚನೆ: ಕೆ. ಎಸ್. ನಿಸ್ಸಾರ್ ಅಹಮದ್
ಗಾಯನ:

ನಿತ್ಯೋತ್ಸವ
- ಕೆ. ಎಸ್. ನಿಸಾರ್ ಅಹಮದ್

ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ,
ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ...

ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ,
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ,
ಓಲೆ ಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ
ನಿತ್ಯೋತ್ಸವ ತಾಯಿ, ನಿತ್ಯೋತ್ಸವ ನಿನಗೆ....

ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ,
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ

ನೀ ಹಿಂಗ ನೋಡಬ್ಯಾಡ ನನ್ನ

ನೀ ಹಿಂಗ ನೋಡಬ್ಯಾಡ ನನ್ನ
ರಚನೆ: ದ. ರಾ. ಬೇಂದ್ರೆ
ಗಾಯನ: ಸಿ. ಅಶ್ವಥ್


ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ,
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ?

ಸಂಸಾರ ಸಾಗರದಾಗ ಲೆಕ್ಕವಿರದಷ್ಟು ದುಃಖದ ಬಂಡಿ,
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ, ಎಲ್ಲಿ ಆಚೆಯ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ,
ನಾ ತಡಿಲಾರೆ ಅದು ಯಾಕ ನೋಡತೀ, ಮತ್ತ ಮತ್ತ ನೀ ಇತ್ತ
ತಂಬಳ ಹಾಕದ ತುಂಬಾ ಕೆಂಪು ಗಿಣಿ ಗದಕ ಹಣ್ಣಿನ ಹಂಗ,
ಇದ್ದಂತ ತುಟಿಯ ಬಣ್ಣೆತ್ತ ಹಾರಿತು, ಯಾವ ಘಳಿಗೆ ಹಿಂಗ?
ಈ ಗತ್ತಗಲ್ಲ ಹನಿ ಕಣ್ಣು ಕಂಡು, ಮಾರಿಗೆ ಮಾರಿಯ ರೀತಿ,
ಸವನ ತನ್ನ ಕೈ ಸವರಿತಿಲ್ಲಿ, ಬಂತೆನಗ ಇಲ್ಲದ ಭೀತಿ,
ನೀ ಹಿಂಗ ನೋಡಬ್ಯಾಡ ನನ್ನ

ಇಬ್ಬನಿ ತೊಳೆದರು ಹಾಲು ಮೆಟ್ಟಿದ ಕವಲಿ ಕಾಂತಿಯ ಹಣ್ಣು
ಹೊಳೆ ಹೊಳೆವ ಹಂಗ ಕಣ್ಣಿರುವ ಹೆಣ್ಣ, ಹೇಳು ನಿನ್ನವೇನ ಈ ಕಣ್ಣು,
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ,
ಹುಣ್ಣಿಮಿ ಚಂದಿರನ ಹೆಣ ಬಂತೋ ಮುಗಿಲಾಗ ತೆಲತಾ ಹಗಲ,
ನಿನ್ನ ಕಣ್ಣಿನಾಗ ಕಾಲೂರಿ ಮಳೆಯೂ, ನಡ ನಡಕ ಹುಚ್ಚು ನಗಿ ಯಾಕ?
ಹನಿ ಒಡೆಯಲಿಕ್ಕೆ ಬಂದಂತ ಮೋಡ ತಡದಂಗ ಗಾಳಿಯ ನೆವಕ,
ಅತ್ತರೆ ಅತ್ತು ಬಿಡು ಹೊನಲು ಬರಲಿ, ನಾಕ್ಯಾಕ ಮರಸತಿ ದುಃಖ,
ಎದೆ ಬಿರಿಸಿ ಕೆಡವು ಬಿರಿಗಣ್ಣು ಬ್ಯಾಡ ತುಟಿ ಕಚ್ಚಿ ಹಿಡಿಯದಿರು ಬಿಕ್ಕ,

ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ,
ತಿರುಗಿ ನಾ ಹೆಂಗ ನೋಡಲೇ ನಿನ್ನ?

ದೀಪವು ನಿನ್ನದೇ ಗಾಳಿಯು ನಿನ್ನದೇ

ದೀಪವು ನಿನ್ನದೇ ಗಾಳಿಯು ನಿನ್ನದೇ
ಚಿತ್ರ: ಮೈಸೂರು ಮಲ್ಲಿಗೆ
ರಚನೆ: ಡಾ. ಕೆ.ಎಸ್. ನರಸಿಂಹಸ್ವಾಮಿ
ಗಾಯನ: ಸಿ. ಅಶ್ವಥ್


ದೀಪವು ನಿನ್ನದೆ, ಗಾಳಿಯು ನಿನ್ನದೆ, ಆರದಿರಲಿ ಬೆಳಕು
ಕಡಲು ನಿನ್ನದೆ, ಹಡಗು ನಿನ್ನದೆ, ಮುಳುಗದಿರಲಿ ಬದುಕು

ಬೆಟ್ಟವು ನಿನ್ನದೆ, ಬಯಲು ನಿನ್ನದೆ, ಹಬ್ಬಿ ನಗಲಿ ಪ್ರೀತಿ
ನೆರಳು, ಬಿಸಿಲು ಎಲ್ಲವೂ ನಿನ್ನವೆ ಇರಲಿ ಏಕರೀತಿ

ಆಗೊಂದು ಸಿಡಿಲು, ಈಗೊಂದು ಮುಗಿಲು, ನಿನಗೆ ಅಲಂಕಾರ
ಅಲ್ಲೊಂದು ಒಂದು ಹಕ್ಕಿ, ಇಲ್ಲೊಂದು ಮುಗುಳು ನಿನಗೆ ನಮಸ್ಕಾರ
ಕಡಲು ನಿನ್ನದೆ, ಹಡುಗು ನಿನ್ನದೆ, ಮುಳುಗದಿರಲಿ ಬದುಕು

ಅಲ್ಲಿ ರಣ ದುಂದುಭಿ, ಇಲ್ಲೊಂದು ವೀಣೆ ನಿನ್ನ ಪ್ರತಿಧ್ವನಿ,
ಆ ಮಹಾಕಾವ್ಯ, ಈ ಭಾವಗೀತೆ ನಿನ್ನ ಪದಧ್ವನಿ

ದೀಪವು ನಿನ್ನದೆ, ಗಾಳಿಯು ನಿನ್ನದೆ, ಆರದಿರಲಿ ಬೆಳಕು
ಕಡಲು ನಿನ್ನದೆ, ಹಡಗು ನಿನ್ನದೆ, ಮುಳುಗದಿರಲಿ ಬದುಕು